Swipe to read next story
NewsPoint

ಮಂಗಳೂರು : ಏ.27ರಂದು ಕಾಂಗ್ರೆಸ್ ಪ್ರಣಾಳಿಕೆ ಮಂಗಳೂರಿನಲ್ಲಿ ಬಿಡುಗಡೆ ಮಾಡಲಿರುವ ರಾಹುಲ್ ಗಾಂಧಿ

Send Push
Daijiworld247 Kannada
26th April, 2018 10:24 IST

ಮಂಗಳೂರು, ಏ ೨೬: ಪ್ರಥಮ ಬಾರಿಗೆ ಮಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ನ ಪ್ರಣಾಳಿಕೆ ಬಿಡುಗಡೆಯಾಗಲಿದೆ. ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ಘೋಷಿಸುವ ಯೋಜನೆ- ಯೋಚನೆಗಳ ಬಹುನಿರೀಕ್ಷಿತ ಚುನಾವಣಾ ಪ್ರಣಾಳಿಕೆ ಏ.27ರಂದು ಮಂಗಳೂರಿನ ಟಿಎಂಎ ಪೈ ಸಭಾಂಗಣದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಣಾಳಿಕೆ ಬಿಡುಗಡೆ ಮಾಡಲಿರುವರು.

ಸಾಂದರ್ಭಿಕ ಚಿತ್ರ

ಕರಾವಳಿಯಲ್ಲಿ ಕಾಂಗ್ರೆಸ್ ಬಲಿಷ್ಟಗೊಂಡಿರುವ ಹಿನ್ನಲೆಯಲ್ಲಿ ಹಾಗೂ ಕರಾವಳಿಯ ಮೂಲಕ ರಾಜ್ಯಕ್ಕೆ ಕಾಂಗ್ರೆಸ್ ಶಕ್ತಿಯ ಉದಯವಾಗಬೇಕು ಎಂಬ ನೆಲೆಯಲ್ಲಿ ಪಕ್ಷದ ಪ್ರಣಾಳಿಕೆಯನ್ನು ಮಂಗಳೂರಿನಲ್ಲಿ ಬಿಡುಗಡೆ ಮಾಡುವ ನಿರ್ಧಾರವನ್ನು ಕಾಂಗ್ರೆಸ್ ನ ಹಿರಿಯ ಮುಖಂಡರು ಕೈಗೊಂಡಿದ್ದಾರೆ. ಏ. 27 ರಂದು ಕರಾವಳಿ ಪ್ರವಾಸ ಕೈಗೊಳ್ಳಲಿರುವ ರಾಹುಲ್ ಗಾಂದಿ ಅವರಲ್ಲಿ ಮಂಗಳೂರಿನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡುವಂತೆ ವಿನಂತಿಸಿದ್ದು, ರಾಹುಲ್ ಗಾಂಧಿ ಕೂಡಾ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ರಾಜ್ಯ ಉಸ್ತುವಾರಿ ಕೆ.ಸಿ ವೇಣುಗೋಪಾಲ್, ಡಾ. ಜಿ ಪರಮೇಶ್ವರ್, ಖರ್ಗೆ ಮತ್ತಿತರು ಭಾಗವಹಿಸಲಿದ್ದಾರೆ

 

To get the latest scoop and updates on NewsPoint
Download the app