Hero Image

BIGG NEWS : 'SSLC' ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ತಾಲೂಕು ಮಟ್ಟದಲ್ಲೇ 'ಪ್ರಿಪರೇಟರಿ ಪ್ರಶ್ನೆ ಪತ್ರಿಕೆ' ತಯಾರಿ

ಬೆಂಗಳೂರು: ಎಸ್ ಎಸ್ ಎಲ್ ಸಿ (SSLC) ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಈ ಬಾರಿ ತಾಲೂಕು ಮಟ್ಟದಲ್ಲಿ ಸಿದ್ದಪಡಿಸಲಾಗುತ್ತಿದೆ.

ಹೌದು, ಇದುವರೆಗೆ ರಾಜ್ಯ ಮಟ್ಟದಲ್ಲಿ ನಡೆಯುತ್ತಿದ್ದ ಪ್ರಶ್ನೆ ಪತ್ರಿಕೆ ತಯಾರಿಯ ಜವಾಬ್ದಾರಿಯನ್ನು 2022-23ರ ಸಾಲಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಲಾಗಿದೆ.

ಪೂರ್ವ ಸಿದ್ಧತಾ ಪರೀಕ್ಷೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲೇ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಅನುಮೋದನೆ ನೀಡಿದ್ದಾರೆ.

ಮಾದರಿ ಪ್ರಶ್ನೆ ಪತ್ರಿಕೆಯನ್ನು ರಾಜ್ಯದ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್ಗೆ ಅಪ್ಲೋಡ್ ಮಾಡಲಾಗುವುದು. ಆ ಮಾದರಿ ಪ್ರಶ್ನೆ ಪತ್ರಿಕೆಯನ್ನು ಅನುಸರಿಸಿ ಬಿಇಒಗಳು ತಮ್ಮ ಹಂತದಲ್ಲಿಯೇ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ನಂತರ ಮುದ್ರಣ ಮಾಡಿ ತಾಲೂಕು ಹಂತದ ಸ್ಟ್ಯಾಂಗ್ ರೂಂನಲ್ಲಿ ಸುರಕ್ಷಿತವಾಗಿಡಬೇಕು . ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಪರೀಕ್ಷೆ ನಡೆಸಬೇಕು, ಆಯಾ ವಿಷಯದ ಪರೀಕ್ಷಾ ದಿನದಂದು ಅವುಗಳನ್ನು ಬಿಗಿ ಭದ್ರತೆಯಲ್ಲಿ ಶಾಲೆಗಳಿಗೆ ವಿತರಣೆ ಮಾಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚಿಸಿದೆ.

ಎಕ್ಸಾಂ ಬರೆಯಲು ಬಂದು ಪ್ರಜ್ಞೆ ತಪ್ಪಿ ಬಿದ್ದ ವಿದ್ಯಾರ್ಥಿ!… ಇದಕ್ಕೆ ಕಾರಣ ಕೇಳಿದ್ರೆ, ನೀವೂ ಶಾಕ್ ಆಗ್ತೀರ!

READ ON APP