Hero Image

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ "ಕೈ' ದೂರು

ತಿರುವನಂತಪುರಂ: ಮತದಾನಕ್ಕೆ ಒಂದು ದಿನ ಬಾಕಿ ಇರುವಂತೆಯೇ ಕೇರಳದ ಚರ್ಚುಗಳಿಗೆ ಭೇಟಿ ನೀಡುತ್ತಿರುವ ದಿಲ್ಲಿ ಲೆಫ್ಟಿನೆಂಟ್ ಗೌರ್ನರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೇರಳದ ಪ್ರತಿಪಕ್ಷ ನಾಯಕ, ಕಾಂಗ್ರೆಸ್ನ ವಿ.ಡಿ.ಸತೀಶನ್ ಅವರು ಒತ್ತಾಯಿಸಿದ್ದಾರೆ.

ದಿಲ್ಲಿ ಲೆಫ್ಟಿನೆಂಟ್ ಗೌರ್ನರ್ ಅವರು ಚರ್ಚುಗಳಿಗೆ ಭೇಟಿ ನೀಡಿ, ಬಿಜೆಪಿ ಪರವಾಗಿ ಕ್ರೈಸ್ತ ಸಮುದಾಯವನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದು ವಿ.ಡಿ.ಸತೀಶನ್ ಆರೋಪಿಸಿದ್ದಾರೆ.

ಅಲ್ಲದೇ, ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದು, ದಿಲ್ಲಿ ಗೌರ್ನರ್ ನಡೆಯು ಮಾದರಿ ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಕೆಲವು ವರದಿಗಳ ಪ್ರಕಾರ, ಚರ್ಚಗಳ ಕೆಲವು ಮುಖ್ಯಸ್ಥರು ದಿಲ್ಲಿ ಲೆಫ್ಟಿನೆಂಟ್ ಗೌರ್ನರ್ ಅವರನ್ನು ಭೇಟಿಯಾಗಲು ನಿರಾಕರಿಸಿದ್ದಾರೆಂದೂ ಅವರು ತಿಳಿಸಿದ್ದಾರೆ.

READ ON APP