Hero Image

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಉರಿ ಬಿಸಿಲ ವಾತಾವರಣವಿತ್ತು. ತಾಪಮಾನವೂ ಏರಿಕೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳು ಒಣಹವೆ ಇರಲಿದೆ. ಸದ್ಯ ಮಳೆಯ ಮುನ್ಸೂಚನೆ ಇಲ್ಲ.

ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ, ದಕ್ಷಿಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 29ರ ವರೆಗೆ ಬಿಸಿಗಾಳಿ, ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆಯಿದೆ. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆದ್ರìತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಮಂಗಳೂರಿನಲ್ಲಿ ಗುರುವಾರ ದಿನದ ಗರಿಷ್ಠ ತಾಪಮಾನ 35.2 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 26.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

READ ON APP