Karkala: ಹಿರಿಯ ವಕೀಲ, ಬಿಜೆಪಿ ನೇತಾರ ಎಂ.ಕೆ. ವಿಜಯಕುಮಾರ್ ನಿಧನ
ಕಾರ್ಕಳ: ಹಿರಿಯ ವಕೀಲ, ಬಿಜೆಪಿ ಹಿರಿಯ ನಾಯಕರಾದ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಂ.ಕೆ. ವಿಜಯಕುಮಾರ್ (82) ಅವರು ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮನೆಯಲ್ಲಿ ಕುಸಿದು ಬಿದ್ದ ಅವರನ್ನು ತಕ್ಷಣ ಕಾರ್ಕಳದ ರೋಟರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.
1968ರಲ್ಲಿ ವಕೀಲ ವೃತ್ತಿಗೆ ಪ್ರವೇಶಿಸಿದ ವಿಜಯಕುಮಾರ್ ಅವರು, ಬಡವರು, ಕೃಷಿಕಾರ್ಮಿಕರು ಮತ್ತು ಅಸಹಾಯಕ ಮಹಿಳೆಯರ ಪರ ಉಚಿತವಾಗಿ ವಾದ ಮಂಡಿಸುವ ಮೂಲಕ ಸಾಮಾಜಿಕ ಜಾಗೃತಿ ಮೂಡಿಸಿದರು. ವಿಜ್ಞಾನ ಮತ್ತು ಕಾನೂನಿನಲ್ಲಿ ಪದವಿ ಪಡೆದ ಅವರು ಕಾನೂನು ಕ್ಷೇತ್ರದೊಂದಿಗೆ ಸಮಾಜಸೇವೆ, ಧಾರ್ಮಿಕ ಹಾಗೂ ಪರಿಸರಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.
ಸಮಾಜಮುಖಿ ಸೇವೆಗಾಗಿ ರಾಜ್ಯೋತ್ಸವ ಪ್ರಶಸ್ತಿಯನ್ನೂ ಪಡೆದಿದ್ದ ಅವರು, ಕಾರ್ಕಳದಲ್ಲಿ ವಿಧಾನಸಭಾ ಚುನಾವಣೆಯಲ್ಲಿಯೂ ಸ್ಪರ್ಧಿಸಿದ್ದರು. ಕಾರ್ಕಳ ಬಿಜೆಪಿಯಲ್ಲಿ ಹಿರಿಯರಾಗಿ ಪಕ್ಷಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ.
ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ.
Next Story