Suspended: ಗಣತಿಗೆ ಹಾಜರಾಗದೇ ನಿರ್ಲಕ್ಷ್ಯ... ಶಿಕ್ಷಕ ಅಮಾನತು
ಉಡುಪಿ: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಕಾರ್ಯಾದೇಶ ನೀಡಿದ್ದರೂ ಸ್ವೀಕರಿಸದೇ ಸಮೀಕ್ಷೆಗೂ ಹಾಜರಾಗದೇ ನಿರ್ಲಕ್ಷ್ಯ ತೋರಿದ ಬ್ರಹ್ಮಾವರ ಶೈಕ್ಷಣಿಕ ವಲಯದ ಶೆಟ್ಟಿಬೆಟ್ಟು ಸ.ಪ್ರೌಢ ಶಾಲೆಯ ಸಹ ಶಿಕ್ಷಕ ವೆಂಕಟೇಶ್ ಪಿ. ಬಿ. ಅವರನ್ನು ಅಮಾನತುಗೊಳಿಸಿರುವುದಾಗಿ ಜಿಲ್ಲಾಧಿಕಾರಿ ಪ್ರಕಟನೆ ತಿಳಿಸಿದೆ.
ವೆಂಕಟೇಶ್ ಅವರು ನೇಮಕಾತಿ ಆದೇಶವನ್ನು ಸ್ವೀಕರಿಸಿರುವುದಿಲ್ಲ, ಹಲವು ಬಾರಿ ದೂರವಾಣಿ ಮೂಲಕ ಸಂಪರ್ಕಿಸಿದರೂ ನೇಮಕಾತಿ ಆದೇಶ ಪ್ರತಿ ಸ್ವೀಕರಿಸಲು ನಿರಾಕರಿಸಿದ್ದಾರೆ. ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು ಈವರೆಗೂ ನೋಟಿಸ್ ಗೆ ಸಮಜಾಯಿಷಿ ನೀಡಿರುವುದಿಲ್ಲ ಎಂದು ತಿಳಿಸಲಾಗಿದೆ.
Next Story