Hero Image

ಲೆಕ್ಕಪರಿಶೋಧನೆ, ಸಹಕಾರ ಇಲಾಖೆಯ ವಿವಿಧ ಹುದ್ದೆಗೆ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ದಿನಾಂಕ ಪ್ರಕಟ

ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಹುದ್ದೆಗಳು ಮತ್ತು ಸಹಕಾರ ಇಲಾಖೆಯಲ್ಲಿನ ಹುದ್ದೆಗಳ ನೇಮಕಾತಿ ಸಂಬಂಧ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮೆರಿಟ್‌ ಆಧಾರದ ಮೇಲೆ ಹಾಗೂ ಮೀಸಲಾತಿವಾರು ಶಾರ್ಟ್‌ ಲಿಸ್ಟ್‌ ಆದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಲು, ಇದೀಗ ಕೆಪಿಎಸ್‌ಸಿ ದಿನಾಂಕಗಳನ್ನು ಬಿಡುಗಡೆ ಮಾಡಿದೆ ಹಾಗೂ ಅಭ್ಯರ್ಥಿಗಳಿಗೆ ಸೂಚನಾ ಪತ್ರಗಳನ್ನು ರವಾನಿಸಲಾಗಿದೆ ಎಂದು ತಿಳಿಸಿದೆ.
ದಿನಾಂಕ 14-03-2023 ರಂದು ಅಧಿಸೂಚಿಸಿದ್ದ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರು 242 (ಉ.ಮೂ.ವೃಂದ) ಹಾಗೂ ದಿನಾಂಕ 17-03-2023 ರ ಅಧಿಸೂಚನೆಯಲ್ಲಿ ಅಧಿಸೂಚಿಸಲಾದ ಸಹಕಾರ ಇಲಾಖೆಯ, ಸಹಕಾರ ಸಂಘಗಳ ನಿರೀಕ್ಷಕರು 47 (RPC) ಹುದ್ದೆಗಳಿಗೆ ಈ ಡಾಕ್ಯುಮೆಂಟ್‌ ವೆರಿಫಿಕೇಶನ್‌ ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲಾಗಿದೆ. ಅರ್ಹತಾ ಪಟ್ಟಿಯನ್ನು ಕೆಪಿಎಸ್‌ಸಿ ಈಗಾಗಲೇ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದ್ದು, ಸೂಚನಾ ಪತ್ರಗಳನ್ನು ರವಾನಿಸಲಾಗಿದೆ ಮತ್ತು ಅದರಲ್ಲಿ ಅಭ್ಯರ್ಥಿಗಳಿಗೆ ಡಾಕ್ಯುಮೆಂಟ್‌ ವೆರಿಫಿಕೇಶನ್ ದಿನಾಂಕ / ಸಮಯ, ವಿಳಾಸವನ್ನು ಪ್ರಕಟಿಸಿದ್ದು, ಅದರಂತೆ ಅಭ್ಯರ್ಥಿಗಳು ಹಾಜರಾಗಲು ತಿಳಿಸಿದೆ. ಮೂಲ ದಾಖಲೆಗಳ ಪರಿಶೀಲನೆ ದಿನಾಂಕಗಳು
02-05-2024 04-05-2024 08-05-2024 09-05-2024 ಮೂಲ ದಾಖಲೆಗಳ ಪರಿಶೀಲನೆ ನಡೆಸಲಾಗುವ ಸ್ಥಳ: ಉದ್ಯೋಗ ಸೌಧ, ಬೆಂಗಳೂರು-560001. ಕೆಪಿಎಸ್‌ಸಿ ಇಂದ ಲೆಕ್ಕಪರಿಶೋಧನೆ ಇಲಾಖೆಯ AC, AO ಹುದ್ದೆಗಳ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ ಅಭ್ಯರ್ಥಿಗಳು ಹಾಜರುಪಡಿಸಬೇಕಾದ ಮೂಲ ದಾಖಲೆಗಳ ಚೆಕ್‌ ಲಿಸ್ಟ್‌ ವಯೋಮಿತಿ ಅರ್ಹತೆ ಪ್ರಮಾಣ ಪತ್ರ (ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಸಹ ಆಗುತ್ತದೆ) ಶೈಕ್ಷಣಿಕ ಅರ್ಹತೆ ಪ್ರಮಾಣ ಪತ್ರ ಜಾತಿ ಮೀಸಲಾತಿಗೆ ಸಂಬಂಧಿಸಿದ ಪ್ರಮಾಣ ಪತ್ರಗಳು ಗ್ರಾಮೀಣ ಮೀಸಲಾತಿಗೆ ಸಂಬಂಧಿಸಿದ ಪ್ರಮಾಣ ಪತ್ರಗಳು ಕನ್ನಡ ಮಾಧ್ಯಮ ಮೀಸಲಾತಿಗೆ ಸಂಬಂಧಿಸಿದ ಪ್ರಮಾಣ ಪತ್ರಗಳು ಮಾಜಿ ಸೈನಿಕರ ಮೀಸಲಾತಿ ಪ್ರಮಾಣ ಪತ್ರಗಳು ಯೋಜನೆಗಳಿಂದ ನಿರಾಶ್ರಿತ ಅಭ್ಯರ್ಥಿಗಳ ಮೀಸಲಾತಿ ಪ್ರಮಾಣ ಪತ್ರ ಅಂಗವಿಕಲ ಅಭ್ಯರ್ಥಿ ಮೀಸಲಾತಿ ಪ್ರಮಾಣ ಪತ್ರ ಸೇವಾ ನಿರತ ಅಭ್ಯರ್ಥಿಗಳ ಪ್ರಮಾಣ ಪತ್ರ ಸಂಬಂಧಪಟ್ಟ ತಾಲ್ಲೂಕು ತಾಹಶೀಲ್ದಾರ್ ರವರಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರ 2 ಪಾಸ್ ಪೋರ್ಟ್‌ ಅಳತೆಯ ಭಾವಚಿತ್ರ ಈ ಮೇಲಿನ ಪ್ರಮಾಣ ಪತ್ರಗಳ ಪೈಕಿ ಮೀಸಲಾತಿಗೆ ಯಾವುದು ಅನ್ವಯವಾಗುತ್ತದೋ ಆ ಎಲ್ಲ ದಾಖಲೆಗಳನ್ನು ಹಾಜರು ಪಡಿಸಬೇಕಿರುತ್ತದೆ.ಅಭ್ಯರ್ಥಿಗಳು ಮೇಲ್ಕಂಡ ಎಲ್ಲಾ ಮೂಲ ದಾಖಲೆಗಳ 2 ಸೆಟ್ ಜೆರಾಕ್ಸ್‌ ಪ್ರತಿಗಳನ್ನು ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಿ ಸಲ್ಲಿಸತಕ್ಕದ್ದು.

READ ON APP