Hero Image

ದ್ವಿತೀಯ ಪಿಯುಸಿ ಪರೀಕ್ಷೆ 2 ವಿಷಯವಾರು ಅಂತಿಮ ವೇಳಾಪಟ್ಟಿ ಬಿಡುಗಡೆ: ಇಲ್ಲಿ ಚೆಕ್ ಮಾಡಿಕೊಳ್ಳಿ..

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ 1 ಬರೆದು ಫಲಿತಾಂಶ ಪಡೆದವರು, ಇದೀಗ ತಮ್ಮ ಫಲಿತಾಂಶ ಉನ್ನತೀಕರಣಕ್ಕಾಗಿ ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ 2 ಬರೆಯಬಹುದು. ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 2 ಅನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಏಪ್ರಿಲ್ 29 ರಿಂದ ಮೇ 16 ರವರೆಗೆ ನಡೆಸಲು ಅಂತಿಮ ದಿನಾಂಕಗಳನ್ನು ನಿಗದಿಪಡಿಸಿದೆ. ಹಾಗೂ ವಿಷಯವಾರು ವೇಳಾಪಟ್ಟಿಯನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ಬಿಡುಗಡೆ ಮಾಡಲಾಗಿದೆ.
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 2 ವಿಷಯವಾರು ಅಂತಿಮ ವೇಳಾಪಟ್ಟಿ ಈ ಕೆಳಗಿನಂತಿದೆ ನೋಡಿ. Karnataka 2nd PUC Exam 2 2024 Final Time Table ಏಪ್ರಿಲ್ 29 ರಿಂದ ಮೇ 16 ರ ನಡುವೆ ಮೇ 1 ರಜಾದಿನ, ಮೇ 05-08 ರವರೆಗೆ ಪರೀಕ್ಷೆ ಇರುವುದಿಲ್ಲ, ಮೇ 10ರಂದು ಬಸವಜಯಂತಿ ಪ್ರಯುಕ್ತ ರಜೆ ದಿನ, ನಂತರ ಮೇ 12ರಂದು ರಜೆ ದಿನ ಇರಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ 2 - ಇತರೆ ಸೂಚನೆ ಪ್ರತಿಯೊಂದು ವಿಷಯದ ಪರೀಕ್ಷೆಯು ಮಧ್ಯಾಹ್ನ 2-15 ರಿಂದ ಸಂಜೆ 04-30 ಗಂಟೆವರೆಗೆ ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ 2 ಅರ್ಜಿ ಸಲ್ಲಿಸಲು ದಿನಾಂಕಗಳು : ಏಪ್ರಿಲ್ 10 ರಿಂದ 16, 2024 ರವರೆಗೆ.
ಮಂಡಲಿಗೆ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ದಂಡರಹಿತ ಪುನರಾವರ್ತಿತ ಹಾಗೂ ಫಲಿತಾಂಶ ಉನ್ನತೀಕರಣಕ್ಕಾಗಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಅರ್ಜಿಗಳು : 18-04-2024ದಂಡಸಹಿತ ಪುನರಾವರ್ತಿತ ಹಾಗೂ ಫಲಿತಾಂಶ ಉನ್ನತೀಕರಣಕ್ಕಾಗಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಅರ್ಜಿಗಳು : 24-04-2024 ದ್ವಿತೀಯ ಪಿಯುಸಿ ಪರೀಕ್ಷೆ 1, 2024 ರಿಸಲ್ಟ್‌: ಟಾಪರ್‌ಗಳ ಲಿಸ್ಟ್‌ ಇಲ್ಲಿದೆ ನೋಡಿ.. ದ್ವಿತೀಯ ಪಿಯುಸಿ ಪರೀಕ್ಷೆ 2 ಪರೀಕ್ಷಾ ಶುಲ್ಕ ವಿವರ ಒಂದು ವಿಷಯಕ್ಕೆ ರೂ.140. ಎರಡು ವಿಷಯಕ್ಕೆ ರೂ.270. ಮೂರು ಅಥವಾ ಹೆಚ್ಚಿನ ವಿಷಯಗಳಿಗೆ ರೂ.400.
ಫಲಿತಾಂಶ ಉತ್ತಮಪಡಿಸಿಕೊಳ್ಳಲು ಪ್ರಥಮ ಬಾರಿಗೆ ಒಂದು ವಿಷಯಕ್ಕೆ ರೂ.175.

READ ON APP